Posts

Showing posts from February, 2011

ಧೋಬಿ ಘಾಟ್ - ಓಟ ಹುಡುಕಾಟಗಳ ಸ್ತಬ್ಧಚಿತ್ರಗಳು

Image
ಮಾನವೀಯ ಕೊಂಡಿಗಳ ಹುಡುಕಾಟವನ್ನೇ ಕಥೆಯ ಜೀವಾಳವಾಗಿಸಿಕೊಂಡಿರುವ "ಧೋಬಿ ಘಾಟ್" ಚಿತ್ರ ಭಾರತೀಯ ಚಲನಚಿತ್ರದ ಸಂದರ್ಭದಲ್ಲಿ ಗಮನಾರ್ಹ ಪ್ರಯತ್ನ. ಸ್ಪಷ್ಟ ಪ್ರಾರಂಭ ಯಾ ಅಂತ್ಯ ಎರಡೂ ಇಲ್ಲದ ಈ ಚಿತ್ರ, ಎಡಬಿಡದ ದುಡಿಮೆಯಲ್ಲೇ ಬದುಕು ಕಟ್ಟಿಕೊಳ್ಳುವ ಮುಂಬೈ ಎಂಬ ವಿರಾಟ್ ನಗರದ ಜನರ ಜೀವನದ ಪರಿಚ್ಛೇದವೊಂದನ್ನು ಕಾಣಿಸುತ್ತದೆ. ನಾಲ್ಕು ವಿಭಿನ್ನ ಹಿನ್ನೆಲೆಯುಳ್ಳ ವಿಭಿನ್ನ ವರ್ಗಗಳಿಗೆ ಸಂಬಂಧಿಸಿದ ವ್ಯಕ್ತಿಗಳು ಈ ಚಿತ್ರದ ಪ್ರಮುಖ ಪಾತ್ರಗಳು. ಸಂಬಂಧವೇ ಇರದ ನಾಲ್ಕು ವ್ಯಕ್ತಿಗಳು ಪರಸ್ಪರರ ಬದುಕುಗಳನ್ನು ಪ್ರಭಾವಿಸುವ ಸೂಕ್ಷ್ಮ ದರ್ಶನ ಚಿತ್ರಕಥೆಯಲ್ಲಿ ಉದ್ಬೋಧಗೊಳ್ಳುತ್ತದೆ. ನಾಟಕೀಯತೆ, ಅತಿ ಅನಿಸಿಬಿಡುವ ಭಾವುಕತೆ ಹಾಗೂ ಸಿನೆಮಾದ ಸಿದ್ಧ ವ್ಯಾಕರಣದ ಕಟ್ಟಳೆಗಳನ್ನು ಬದಿಗಿಟ್ಟು ದೃಶ್ಯಕಥನದಲ್ಲಿ ಒಂದು ವಿಶಿಷ್ಟ ಪ್ರಯೋಗವಾಗಿ ಧೋಬಿ ಘಾಟ್ ಹೊರಹೊಮ್ಮಿದೆ. ನಾಲ್ಕು ಪಾತ್ರಗಳಲ್ಲಿ ಯಾಸ್ಮಿನ್(ಕೃತಿ ಮಲ್ಹೋತ್ರ) ಪಾತ್ರದ ನೇರ ಪರಿಚಯವೇ ಇಲ್ಲ. ಸ್ವತಃ ಯಾಸ್ಮಿನ್ ಳೇ ದಾಖಲಿಸಿಟ್ಟ ದೃಶ್ಯಮುದ್ರಿಕೆಗಳಿಂದ (Video Cassettes) ಆಕೆಯ ಮತ್ತು ಆಕೆಯ ಬದುಕಿನ ಪರಿಚಯವಾಗುತ್ತದೆ. ಪ್ರಾಯಶಃ ಇನ್ನುಳಿದ ಪಾತ್ರಗಳಿಂದ ಯಾಸ್ಮಿನ್ ಳನ್ನು ಬೇರ್ಪಡಿಸಿ ನೋಡುವ ಉದ್ದೇಶ ಇರಬಹುದು. ಅವಳ ಬದುಕಿನ ವಿವರಗಳನ್ನು ನಿರೂಪಿಸಲು ಯಕಃಶ್ಚಿತ್ ಅವಳ ವೀಡಿಯೋ ಕ್ಯಾಮೆರಾದ ದೃಶ್ಯತುಣುಕುಗಳನ್ನೇ ತೋರಿಸಲಾಗಿದೆ. ಸಣ್ಣದೊಂದು ಊರಿನಿಂದ ಮುಂಬೈಗೆ ತನ್ನ ಪತಿಯ ಜೊತೆ